BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.28 ಕ್ಕೆ ಮುಂದೂಡಿದ ಹೈಕೋರ್ಟ್.!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ.

ನ್ಯಾ.ಎಸ್ ವಿಶ್ವಜಿತ್ ಅವರಿದ್ದ ಪೀಠ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದು, ಅರ್ಜಿ ವಿಚಾರಣೆಯನ್ನು ಅ.28 ಕ್ಕೆ ಮುಂದೂಡಿದೆ. ಇಂದು ಕೋರ್ಟ್ ನಲ್ಲಿ ಯಾವುದೇ ವಾದ ಮಂಡನೆ ನಡೆಯಲಿಲ್ಲ. ಜೈಲಾಧಿಕಾರಿಗಳಿಂದ ವರದಿ ಕೇಳಿದ ಕೋರ್ಟ್ ಅ.28 ಕ್ಕೆ ವಿಚಾರಣೆ ಮುಂದೂಡಿದೆ.

ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಗೆ ಕಾನೂನು ಹೋರಾಟದಲ್ಲಿ ಭಾರಿ ಹಿನ್ನಡೆಯಾಗಿದ್ದು, ಜಾಮೀನು ಅರ್ಜಿ ವಜಾಗೊಂಡಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್, ಬಳ್ಳಾರಿ ಜೈಲು ಸೇರಿದ್ದು, ಜಾಮೀನಿನ ನಿರೀಕ್ಷೆಯಲ್ಲಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿ ಹೆಚ್ ಕೋರ್ಟ್ ನಟ ದರ್ಶನ್ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆ ನಟ ದರ್ಶನ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಒಂದೆಡೆ ಜಾಮೀನಿಗಾಗಿ ಪರದಾಟ ನಡೆಸಿದ್ದರೆ, ಮತ್ತೊಂದೆಡೆ ಬೆನ್ನು ನೋವಿನಿಂದ ಒದ್ದಾಡುತ್ತಿದ್ದಾರೆ. ಕೊಲೆ ಆರೋಪಿ ನಟ ದರ್ಶನ್ ಬಳ್ಳಾರಿ ಕೇಂದ್ರ ಕಾರಾಗೃಹ ಜೈಲಿನಲ್ಲಿ ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ನಿಲ್ಲುವುದಕ್ಕೂ ಆಗದೇ, ನಡೆಯುವುದಕ್ಕೂ ಆಗದೇ ನರಳಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read