BREAKING : ನಟ ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆ ; ‘FSL’ ವರದಿಯಲ್ಲಿ ಕೊಲೆ ರಹಸ್ಯ ಬಯಲು..!

ಬೆಂಗಳೂರು : ನಟ ದರ್ಶನ್ ಬಟ್ಟೆ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿರುವುದು ಎಫ್ ಎಸ್ ಎಲ್ ವರದಿಯಲ್ಲಿ ಧೃಡವಾಗಿದೆ.

ಎಫ್ ಎಸ್ ಎಲ್ ವರದಿಯಲ್ಲಿ ಭಯಾನಕ ಸತ್ಯವೊಂದು ಹೊರಬಿದ್ದಿದ್ದು, ಈ ಮೂಲಕ ನಟ ದರ್ಶನ್ ಗೆ ಸಂಕಷ್ಟ ಎದುರಾಗಿದೆ.

ದರ್ಶನ್ ಮನೆಯಲ್ಲಿ ವಶಪಡಿಸಿಕೊಂಡಿದ್ದಂಹ ದರ್ಶನ್ ಅವರ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಗೂ ಕಪ್ಪು ಬಣ್ಣದ ರೌಂಡ್ ನೆಕ್ ಟೀ ಶರ್ಟ್ ನ್ನು ಎಫ್ ಎಸ್ ಎಲ್ ವರದಿಗೆ ಕಳುಹಿಸಲಾಗಿತ್ತು. ದರ್ಶನ್ ಬಟ್ಟೆಯ ಮೇಲೆ ಸಿಕ್ಕಂತಹ ರಕ್ತದ ಕಲೆಗಳು ರೇಣುಕಾಸ್ವಾಮಿ ಅವರದ್ದೇ ಎಂಬುದು ಎಫ್ ಎಸ್ ಎಲ್ ವರದಿಯಲ್ಲಿ ಧೃಡವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ ಬಟ್ಟೆಯಿಂದ ಹಿಡಿದು ಬೆಲ್ಟ್, ಶೂ ತನಕ. ವಾಹನ, ಗೇಟ್ , ಕೊಲೆಗೆ ಬಳಸಿದ ಆಯುಧ ಸೇರಿದಂತೆ ಎಲ್ಲಾ ವಸ್ತುಗಳ ಎಫ್ ಎಸ್ ಎಲ್ ರಿಪೋರ್ಟ್ ಪೊಲೀಸರ ಕೈ ಸೇರಲಿದೆ. ಈಗಾಗಲೇ ರೇಣುಕಾಸ್ವಾಮಿ ಮೊಬೈಲ್ ರಿಟ್ರೀವ್ ಮಾಡಲಾಗಿದ್ದು, ಎಲ್ಲಾ ದರ್ಶನ್ & ಗ್ಯಾಂಗ್ ಗೆ ದೊಡ್ಡ ಉರುಳಾಗುವ ಸಾಧ್ಯತೆಯಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನವಾಗಿದ್ದು, ಸದ್ಯ ಸೆರೆಮನೆ ವಾಸ ಅನುಭವಿಸುತ್ತಿದೆ. ಸದ್ಯದಲ್ಲೇ ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಬಿಡುಗಡೆಗೆ ಅಭಿಮಾನಿಗಳು ಕಾಯುತ್ತಿದ್ದಾರೆ. ಇದರ ನಡುವೆ ದೇವಸ್ಥಾನದಲ್ಲಿ ನಟ ದರ್ಶನ್ ಫೋಟೋಗೆ ಪೂಜೆ ಮಾಡಿದ ಅರ್ಚಕನೋರ್ವ ಅಮಾನತು ಆದ ಘಟನೆ ನಿನ್ನೆ ಬಳ್ಳಾರಿಯಲ್ಲಿ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read