BREAKING : ಅಮರನಾಥದಲ್ಲಿ ಸಿಲುಕಿರುವ ಕನ್ನಡಿಗರು : ರಕ್ಷಣೆಗೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ನೇಮಕ

 

 

ಬೆಂಗಳೂರು : ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರವು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಅವರನ್ನು ನೇಮಕ ಮಾಡಿದೆ.

ಅಮರನಾಥ ಯಾತ್ರೆಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಸಂಪರ್ಕಕ್ಕೆ ಸಿಕ್ಕ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ. ಸಂತ್ರಸ್ತರ ರಕ್ಷಣೆ ಹಾಗೂ ರಾಜ್ಯಕ್ಕೆ ಕರೆ ತರುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.

ಗದಗ ಜಿಲ್ಲೆಯ 23 ಮಂದಿ ಸೇರಿದಂತೆ ಒಟ್ಟು 80 ಮಂದಿ ಜುಲೈ 4ರಂದು ಅಮರನಾಥ ದರ್ಶನಕ್ಕೆ ತೆರಳಿದ್ದರು. ದರ್ಶನ ಪಡೆದು ಶುಕ್ರವಾರ ವಾಪಸ್ ತೆರಳುವ ಸಂದರ್ಭದಲ್ಲಿ ಭಾರಿ ಮಳೆಯಿಂದಾಗಿ ಮಾರ್ಗಮಧ್ಯೆ ಗುಡ್ಡ ಕುಸಿತವಾಗಿದೆ. ಬೇಸ್ ಕ್ಯಾಂಪ್ ನಲ್ಲಿ ಆಶ್ರಯ ಪಡೆದು ಯಾತ್ರೆಗಳು ಸುರಕ್ಷಿತವಾಗಿದ್ದಾರೆ. ಸದ್ಯ 6 ಯಾತ್ರಾರ್ಥಿಗಳನ್ನು ಹೆಲಿಕಾಪ್ಟರ್ ಮೂಲಕ ಏರ್ ಲಿಫ್ಟ್ ಮಾಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read