ಮೈಸೂರು: ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 25,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಮೈಸೂರು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಪಾಲಿಕೆ ವಲಯ ಕಚೇರಿಯ ಬಿಲ್ ಕಲೆಕ್ಟರ್ ರಜಾಕ್ ಮತ್ತು ಕಂದಾಯ ಅಧಿಕಾರಿ ನಂದೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪೊಲೀಸ್ ಅಧೀಕ್ಷಕ ಉದೇಶ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇ- ಸ್ವತ್ತು ಮಾಡಿಕೊಡಲು 25,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.