HomeKarnatakaBREAKING : ರಾಕ್ ಲೈನ್ ವೆಂಕಟೇಶ್ ತಮ್ಮನ ಮನೆಯಲ್ಲಿ ಕಳ್ಳತನ ಪ್ರಕರಣ : ಏಳು ...

BREAKING : ರಾಕ್ ಲೈನ್ ವೆಂಕಟೇಶ್ ತಮ್ಮನ ಮನೆಯಲ್ಲಿ ಕಳ್ಳತನ ಪ್ರಕರಣ : ಏಳು ಮಂದಿ ಆರೋಪಿಗಳು ಅರೆಸ್ಟ್

ಬೆಂಗಳೂರು : ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ‘ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದೂವರೆ ಕೋಟಿ ರೂ ಮೌಲ್ಯದ ಚಿನ್ನ. ಬೆಳ್ಳಿ ವಶಕ್ಕೆ ಪಡೆದಿದ್ದಾರೆ. ಕುಟುಂಬದವರು ಪ್ರವಾಸಕ್ಕೆ ಹೋಗಿದ್ದಾಗ ಕಳ್ಳತನ ನಡೆದಿದೆ. ಆರೋಪಿಗಳು ಈ ಹಿಂದೆ ಕೂಡ ಸಾಕಷ್ಟು ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಮಾಹಿತಿ ನೀಡಿದರು.

ನಟ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸಹೋದರನ ಮನೆಯಲ್ಲಿ ಕಳ್ಳತನ ನಡೆದಿದ್ದು, 5 ಕೆಜಿ ಚಿನ್ನ ಹಾಗೂ 6 ಲಕ್ಷ ನಗದು ಕಳ್ಳತನವಾಗಿತ್ತು. ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ರಾಕ್ ಲೈನ್ ವೆಂಕಟೇಶ್ ಸಹೋದರ ಭ್ರಮರೇಶ್ ಮನೆಯಲ್ಲಿ ಈ ಘಟನೆ ನಡೆದಿತ್ತು. ಮನೆಯವರು ಯುರೋಪ್ ಪ್ರವಾಸಕ್ಕೆ ಹೋದಾಗ ಮನೆ ಕಿಟಕಿ ಒಡೆದು ಮನೆಗೆ ನುಗ್ಗಿದ ಖದೀಮರು ಚಿನ್ನ ಹಾಗೂ ಹಣ ದೋಚಿದ್ದರು. ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular