ಬೆಂಗಳೂರು: ಭಾರತಿನಗರದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪ್ಯಾಟ್ರಿಕ್ ಬಂಧಿತ ಆರೋಪಿ. ಭಾರತಿ ನಗರ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ ಪ್ಯಾಟ್ರಿಕ್ ನನ್ನು ಬಂಧಿಸಿದ್ದು, ಇದರೊಂದಿಗೆ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.
ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೆಣ್ಣೂರಿನ ಜಗದೀಶ್ ವಿದೇಶಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಭೂ ವಿವಾದದ ಹಿನ್ನೆಲೆಯಲ್ಲಿ ಸಹಚರರ ಮೂಲಕ ಬಿಕ್ಲು ಶಿವನನ್ನು ಭೀಕರವಾಗಿ ಹತ್ಯೆ ಮಾಡಿದ ಆರೋಪ ಜಗದೀಶ್ ಮೇಲಿದೆ. ಈತನೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಶಾಸಕ ಬೈರತಿ ಬಸವರಾಜು ಅವರು ವಿಚಾರಣೆ ಎದುರಿಸಿದ್ದಾರೆ.