HomeLatest NewsBREAKING : ರೌಡಿಶೀಟರ್ 'ಬಿಕ್ಲು ಶಿವ' ಕೊಲೆ ಕೇಸ್ : ವಿಚಾರಣೆಗೆ ಹಾಜರಾಗುವಂತೆ ಶಾಸಕ 'ಭೈರತಿ...

BREAKING : ರೌಡಿಶೀಟರ್ ‘ಬಿಕ್ಲು ಶಿವ’ ಕೊಲೆ ಕೇಸ್ : ವಿಚಾರಣೆಗೆ ಹಾಜರಾಗುವಂತೆ ಶಾಸಕ ‘ಭೈರತಿ ಬಸವರಾಜ್’ ಗೆ ನೋಟಿಸ್ ಜಾರಿ.!

ಬೆಂಗಳೂರು : ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.

ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಬೈರತಿ ಬಸವರಾಜ್ ಹೆಸರು ತಳುಕು ಹಾಕಿಕೊಂಡಿದ್ದು, ಬೈರತಿ ಬಸವರಾಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.ಭಾರತಿನಗರ ಠಾಣೆಯಲ್ಲಿ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಮಾಜಿ ಸಚಿವ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಜಗದೀಶ್ ಎ1, ಕಿರಣ್ ಎ2, ವಿಮಲ್ ಎ 3, ಅನಿಲ್ ಎ4 ರೋಪಿಗಳಾಗಿದ್ದಾರೆ.

ಕಿತ್ತನೂರು ಜಾಗದ ವಿಚಾರವಾಗಿ ರೌಡಿಶೀಟರ್ ಶಿವಪ್ರಕಾಶ್ ಕೊಲೆ ಮಾಡಲಾಗಿದೆ. ಬಿಳಿಬಣ್ಣದ ಸ್ಕಾರ್ಪಿಯೋದಲ್ಲಿ 8-9 ಜನರು ಬಂದು ಶಿವಪ್ರಕಾಶ್ ಗೆ ಬೆದರಿಕೆ ಹಾಕಿದ್ದರು. ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ತಾಯಿ ವಿಜಯಲಕ್ಷ್ಮೀ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೌಡಿಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಪ್ರಕಾಶ್ ಹತ್ಯೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಆತ ಯಾರೆಂಬುದೂ ನನಗೆ ಗೊತ್ತಿಲ್ಲ ಎಂದು ಬಿಜೆಪಿ ಮಾಜಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ. ರೌಡಿ ಶೀಟರ್ ಕೊಲೆ ಪ್ರಕರಣ ಸಂಬಂಧ ತಮ್ಮ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ವಿಚಾರವಾಗಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಬೈರತಿ ಬಸವರಾಜ್, ಕೊಲೆ ಕೇಸ್ ಗೂ ನನಗೂ ಯಾವುದೇ ಸಂಬಂಧವಿಲ್ಲ. ಉದ್ದೇಶ ಪೂರ್ವಕವಾಗಿ ನನ್ನ ವಿರುದ್ಧ ಆರೋಪ ಮಾಡಿ ಪ್ರಕರಣ ದಾಖಲಿಸಲಾಗಿದೆ ಎಂದರು.

ಸುಖಾಸುಮ್ಮನೇ ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ. ಯಾರೋ ದೂರು ನೀಡಿದರು ಎಂದ ಮಾತ್ರಕ್ಕೆ ಎಫ್ ಐ ಆರ್ ದಾಖಲಿಸಬಹುದಾ? ಎಫ್ ಐ ಆರ್ ದಾಖಲಿಸುವಾಗ ನನಗೆ ಮಾಹಿತಿ ಕೂಡ ನೀಡಿಲ್ಲ. ಈ ನಿಟ್ಟಿನಲ್ಲಿ ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular