ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಮಂಗಮ್ಮನ ಪಾಳ್ಯದಲ್ಲಿ ಶಬ್ಬೀರ್(28) ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಬಂಡೆಪಾಳ್ಯ ಮುಖ್ಯ ರಸ್ತೆ ಪಕ್ಕದಲ್ಲಿಯೇ ಶಬ್ಬೀರ್ ಕೊಲೆ ಮಾಡಲಾಗಿದೆ. ರಾತ್ರಿ ಸ್ನೇಹಿತರ ಭೇಟಿಗೆ ಬಂದಿದ್ದ ಶಬೀರ್ ನನ್ನು ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಮಂಗಮ್ಮನ ಪಾಳ್ಯ ರಸ್ತೆಯಲ್ಲಿ ಆಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

