ಚಿತ್ರದುರ್ಗ: ದಾವಣಗೆರೆಯಲ್ಲಿ ರೌಡಿಶೀಟರ್ ಕಣುಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳಲ್ಕೆರೆ ಪೊಲೀಸ್ ಠಾಣೆಗೆ 10 ಜನ ಆರೋಪಿಗಳು ಶರಣಾಗಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪೊಲೀಸ್ ಠಾಣೆಗೆ ಆರೋಪಿಗಳು ಶರಣಾಗಿದ್ದು, ಅವರನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಚಿತ್ರದುರ್ಗ ಡಿವೈಎಸ್ಪಿ ದಿನಕರ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗಿದ್ದು, ಬಸ್ ನಲ್ಲಿ ಹೊಳಲ್ಕೆರೆಗೆ ಬಂದಿರುವುದಾಗಿ ಆರೋಪಿಗಳು ಹೇಳಿಕೆ ನೀಡಿದ್ದಾರೆ. ಆರೋಪಿಗಳನ್ನು ದಾವಣಗೆರೆ ಪೊಲೀಸರಿಗೆ ಒಪ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯೊಂದರ ಮುಂಭಾಗ ನಿನ್ನೆ ರೌಡಿಶೀಟರ್ ಸಂತೋಷ್ ಕುಮಾರ್ ಅಲಿಯಾಸ್ ಕಣುಮಾನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.