ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿಯ ಥಣಿಸಂದ್ರದಲ್ಲಿ ನಡೆದಿದೆ.
ರೌಡಿಶೀಟರ್ ಪವನ್ ಕುಮಾರ್ ನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಧ್ಯರಾತ್ರಿ ದುಷ್ಕರ್ಮಿಗಳು ಮಚ್ಚು, ಲಾಂಗುಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಡಿಜೆಹಳ್ಳಿ ಠಾಣೆಯ ರೌಡಿಶೀಟರ್ ಪವನ್ ಕುಮಾರ್ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ. ಮೂರು ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಹಳೆದ್ವೇಷದ ಹಿನ್ನೆಲೆಯಲ್ಲಿ ಪವನ್ ಕುಮಾರ್ ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

