HomeIndiaಪೊಲೀಸ್ ಗೋಲಿಬಾರ್ ನಲ್ಲಿ ಮೃತಪಟ್ಟ ರೈತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಸಹೋದರಿಗೆ ಸರ್ಕಾರಿ...

ಪೊಲೀಸ್ ಗೋಲಿಬಾರ್ ನಲ್ಲಿ ಮೃತಪಟ್ಟ ರೈತನ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ, ಸಹೋದರಿಗೆ ಸರ್ಕಾರಿ ಉದ್ಯೋಗ: ಪಂಜಾಬ್ ಸಿಎಂ ಘೋಷಣೆ

ನವದೆಹಲಿ: ಖಾನೌರಿ ಗಡಿಯಲ್ಲಿ ಸಾವನ್ನಪಿದ ರೈತ ಶುಭಕರನ್ ಸಿಂಗ್ ಅವರ ಸಹೋದರಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ 1 ಕೋಟಿ ರೂ.ಗಳ ಪರಿಹಾರ ಮತ್ತು ಸರ್ಕಾರಿ ಉದ್ಯೋಗವನ್ನು ಘೋಷಿಸಿದ್ದಾರೆ.

ಪಂಜಾಬ್-ಹರಿಯಾಣ ಗಡಿಯ ಖನೌರಿ ಗಡಿಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಸಾವನ್ನಪ್ಪಿದ್ದು, 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಪ್ರತಿಭಟನಾ ನಿರತ ಕೆಲವು ರೈತರು ಬ್ಯಾರಿಕೇಡ್ಗಳ ಕಡೆಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ.

ಖನೌರಿ ಗಡಿಯಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಹುತಾತ್ಮರಾದ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ ಪಂಜಾಬ್ ಸರ್ಕಾರವು 1 ಕೋಟಿ ರೂ.ಗಳ ಆರ್ಥಿಕ ನೆರವು ಮತ್ತು ಅವರ ತಂಗಿಗೆ ಸರ್ಕಾರಿ ಉದ್ಯೋಗವನ್ನು ನೀಡಲಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಮನ್ ಪಂಜಾಬಿ ಭಾಷೆಯಲ್ಲಿ ಪೋಸ್ಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಂಗ್ ಅವರ ಕುಟುಂಬಕ್ಕೆ ಆರ್ಥಿಕ ಪರಿಹಾರ ಮತ್ತು ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಅವರ ಸಾವಿಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸುತ್ತಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular