ಹಾವೇರಿ : ಹಾವೇರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.
ದೆಹಲಿಯಲ್ಲಿ ಮೃತರಿಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಬೆಂಗಳೂರು -ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿಯ ರಭಸಕ್ಕೆ 7 ಮಹಿಳೆಯರು ಸೇರಿ 13 ಜನ ಸಾವನ್ನಪ್ಪಿದ್ದಾರೆ. ಪರಶುರಾಮ್(45), ಭಾಗ್ಯ(40), ನಾಗೇಶ(50), ವಿಶಾಲಾಕ್ಷಿ(40), ಅರ್ಪಿತಾ(18), ಸುಭದ್ರ ಬಾಯಿ(65), ಪುಣ್ಯ(50), ಮಂಜುಳಾ ಬಾಯಿ ಹಾಗೂ ಚಾಲಕ ಆದರ್ಶ(23), ಮಾನಸ(24), ರೂಪಾ(40), ಮಂಜುಳಾ(50) ಮೃತಪಟ್ಟವರು ಎಂದು ಗುರುತಿಸಲಾಗಿದೆ.
https://twitter.com/CMofKarnataka/status/1806573118485303336?ref_src=twsrc%5Etfw%7Ctwcamp%5Etweetembed%7Ctwterm%5E1806573118485303336%7Ctwgr%5Eb0e2d70e08a4d1bfb1f73bd9438a5224612ba258%7Ctwcon%5Es1_&ref_url=https%3A%2F%2Fwww.kannadaprabha.com%2Fkarnataka%2F2024%2FJun%2F28%2Fcm-siddaramaiah-announces-componsation-for-death-victims-family-members-in-haveri-road-accident