BREAKING: ಮುಸ್ಲಿಂ ಯುವತಿ ಮದುವೆಯಾದವರಿಗೆ 5 ಲಕ್ಷ ರೂ.: ಶಾಸಕ ಯತ್ನಾಳ್ ಘೋಷಣೆ

ಕೊಪ್ಪಳ: ಮುಸ್ಲಿಂ ಯುವತಿ ಪ್ರೀತಿಸಿ ಕೊಲೆಯಾದ ಗವಿಸಿದ್ದಪ್ಪ ಅವರ ಮನೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಈಶ್ವರಪ್ಪ ಭೇಟಿ ನೀಡಿದ್ದಾರೆ.

ಕೊಪ್ಪಳದ ಕುರುಬರ ಓಣಿಯಲ್ಲಿರುವ ಗವಿಸಿದ್ದಪ್ಪ ನಿವಾಸಕ್ಕೆ ಉಭಯ ನಾಯಕರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಆಗಸ್ಟ್ 3ರಂದು ಕೊಪ್ಪಳದಲ್ಲಿ ಗವಿಸಿದ್ದಪ್ಪ ಕೊಲೆ ಮಾಡಲಾಗಿತ್ತು.

ಭೇಟಿ ಬಳಿಕ ಮಾತನಾಡಿದ ವಿಜಯಪುರ ಶಾಸಕ ಯತ್ನಾಳ್, ಮುಸ್ಲಿಂ ಯುವತಿ ಮದುವೆಯಾದವರಿಗೆ 5 ಲಕ್ಷ ರೂಪಾಯಿ ಕೊಡಲಾಗುವುದು. ಈ ರೀತಿಯ ಅಭಿಯಾನ ಆರಂಭಿಸುತ್ತೇವೆ. ಹಿಂದೂಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಮರಲ್ಲಿದೆ. ರೀಲ್ಸ್ ನಲ್ಲಿ ಮಚ್ಚು ತೋರಿಸಿದ್ದಾನೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಗವಿಸಿದ್ದಪ್ಪ ಪ್ರೀತಿಸಿದ್ದ ಹುಡುಗಿಯನ್ನು ಕೂಡ ಬಂಧಿಸಬೇಕು. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಸದನದಲ್ಲಿ ವಿಷಯ ಪ್ರಸ್ತಾಪಿಸುತ್ತೇನೆ. ಮಚ್ಚು ತೆಗೆದುಕೊಂಡು ಓಡುವಡುವವರಿಗೆ ರಾಜ್ಯ ಸರ್ಕಾರದ ಬೆಂಬಲ ಇದೆ ಎಂದು ಟೀಕಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read