HomeKarnatakaBREAKING : ಶಾಸಕ ಮುನಿರತ್ನ, ಪೊಲೀಸ್ ಅಧಿಕಾರಿಗಳು ಸೇರಿ 8 ಮಂದಿ ವಿರುದ್ಧ FIR ದಾಖಲು

BREAKING : ಶಾಸಕ ಮುನಿರತ್ನ, ಪೊಲೀಸ್ ಅಧಿಕಾರಿಗಳು ಸೇರಿ 8 ಮಂದಿ ವಿರುದ್ಧ FIR ದಾಖಲು

ಬೆಂಗಳೂರು: ಸುಳ್ಳು ಪ್ರಕರಣ ದಾಖಲಿಸಿ ಮಹಿಳೆಯೊಬ್ಬರನ್ನು ಬಂಧಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಮೂವರು ಪೊಲೀಸ್ ಅಧಿಕಾರಿ ಸೇರಿ 8 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಸಂತ್ರಸ್ತೆ ನೀಡಿದ ದೂರು ಆಧರಿಸಿ ಕಿರಣ್ ನಾಯ್ಡು, ಲೋಹಿತ್ ಗೌಡ, ಮಂಜುನಾಥ್, ಲಕ್ಷ್ಮಿ, ಜಯರಾಮ್ , ಇಬ್ಬರು ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಪಿಎಸ್ ಐಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ದೂರುದಾರೆ ಹಾಗೂ ಅವರ ಸಹೋದರಿಯನ್ನು ದೆಹಲಿಗೆ ಕರೆದುಕೊಂಡು ಹೋಗಿ ಅಲ್ಲಿ ಪ್ರಕರಣ ವಾಪಸ್ ಪಡೆಯುವಂತೆ ಬೆದರಿಕೆ ಹಾಕಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಪ್ರಕರಣವನ್ನು ಎಸ್ ಐ ಟಿಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುನಿರತ್ನ ಅವರ ವಿರುದ್ಧ ಈ ಹಿಂದೆಯೂ ಹಲವು ಪ್ರಕರಣಗಳು ದಾಖಲಾಗಿದ್ದವು. ಇದೀಗ ಮತ್ತೊಂದು ಎಫ್‌ಐಆರ್ ದಾಖಲಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಗಣೇಶ ಹಬ್ಬದ ಆಚರಣೆ ಮತ್ತು ಮೆರವಣೆಗೆ ವೇಳೆ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಬೈಕ್ ರ‍್ಯಾಲಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ : ಜಿಲ್ಲೆಯಲ್ಲಿ ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ದಿ:14/09/2026 ರಿಂದ ದಿ:13/10/2026 ರವರೆಗೆ 30 ದಿನಗಳ ಕಾಲ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದುಗಳನ್ನು ಸಿಡಿಸುವುದನ್ನು ಮತ್ತು ಬೈಕ್ ರ‍್ಯಾಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಸೆ.14 ರಂದು ಜಿಲ್ಲಾದ್ಯಂತ ಗಣೇಶ ಹಬ್ಬ ನಡೆಯಲಿದ್ದು, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿರುತ್ತವೆ.

ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35, 36 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾದ್ಯಂತ ಸೆ. 14 ರಿಂದ ಅ.13 ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.

ನಿಜ ಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃಧ್ಧಿ ನಿಗಮದಿಂದ 2026-27 ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀನ ಮತ್ತು ನವೀಕರಣ), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು (ನವೀಕರಣ), ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆಗಳಿಗೆ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1ರ 6(ಎ) ಯಿಂದ 6(ಎಕೆ) ವರೆಗೆ ಬರುವ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗೆ, ಕೋಲಿ ಮತ್ತು ಇದರ ಉಪ ಜಾತಿಗಳ (ವಿಶ್ವಕರ್ಮ, ಉಪ್ಪಾರ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯಿತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳನ್ನು ಹೊರತು ಪಡಿಸಿ) ಆಸಕ್ತರುಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬುದು.

ಅರ್ಜಿದಾರರ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆಯಾಗಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಮೇಲ್ಕಂಡ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. 2024-25 ಮತ್ತು 2025-26 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಫಲಾಪೇಕ್ಷಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ನಿಗಮವು ಅನುಷ್ಟಾನಗೊಳಿಸುವ ಯೋಜನೆಗಳಲ್ಲಿ ಸರ್ಕಾರದ ಮತ್ತು ನಿರ್ದೇಶಕರ ಮಂಡಳಿ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಅನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಅಗತ್ಯವಾಗಿರುತ್ತದೆ.

ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೊರು ಒನ್, ಕರ್ನಾಟಕ ಒನ್, ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಸೆ.30 ರೊಳಗಾಗಿ ಅರ್ಜಿಗಳನ್ನು ಸಲ್ಲಿಸುವಂತೆ ನಿಗಮದ ಜಿಲ್ಲಾ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯೋಜನೆ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆಗಳಾದಲ್ಲಿ ಆ ದಿನಾಂಕದಿಂದ ಜಾರಿಗೆ ಬರುವಂತೆ ಯೋಜನೆಯನ್ನು ಜಾರಿಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಾಲತಾಣ https://ambigaradevelopment.karnataka.gov.in, ದೂ.ಸಂ.:080-22864099 ಅಥವಾ ನಿಗಮದ ದೂ. ಸಂ.08182-229634 ಅಥವಾ ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಸಂಪರ್ಕಿಸುವುದು.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular