HomeLatest NewsBREAKING: ಭಾರೀ ಚಳಿ ಹಿನ್ನೆಲೆ ಶಾಲಾ ಸಮಯದಲ್ಲಿ ಬದಲಾವಣೆ: ಬೆಳಗ್ಗೆ 10 ಗಂಟೆಯಿಂದ ಶಾಲೆ ಆರಂಭಿಸಲು...

BREAKING: ಭಾರೀ ಚಳಿ ಹಿನ್ನೆಲೆ ಶಾಲಾ ಸಮಯದಲ್ಲಿ ಬದಲಾವಣೆ: ಬೆಳಗ್ಗೆ 10 ಗಂಟೆಯಿಂದ ಶಾಲೆ ಆರಂಭಿಸಲು ಡಿಸಿ ಆದೇಶ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ತಾಪಮಾನ ಕುಸಿತವಾಗಿ ಚಳಿ ತೀವ್ರತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಬೆಳೆಗೆ 10 ಗಂಟೆಯಿಂದ ಶಾಲೆ ಆರಂಭಿಸುವಂತೆ ಜಿಲ್ಲಾಧಿಕಾರಿ ಕೆ. ಆನಂದ್ ಆದೇಶ ಹೊರಡಿಸಿದ್ದಾರೆ.

ಮುಂದಿನ 10 ದಿನಗಳವರೆಗೆ ಅನ್ವಯವಾಗುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಸರ್ಕಾರಿ, ಅನುದಾನಿತ, ಖಾಸಗಿ ಶಾಲೆಗಳ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ತೀವ್ರ ಚಳಿಯಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿತ್ತು. ಹೀಗಾಗಿ ಶಾಲೆಗಳ ಸಮಯ ಬದಲಾವಣೆಗೆ ಆಗ್ರಹ ಕೇಳಿ ಬಂದಿತ್ತು. ಶಾಲೆಗಳ ಸಮಯ ಬದಲಾವಣೆ ಮಾಡಿ ಡಿಸಿ ಆದೇಶಿಸಿದ್ದಾರೆ. ಇದನ್ನು ಸಾರ್ವಜನಿಕರು ಸ್ವಾಗತಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular