ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ಇನ್ನೂ ಒಂದು ವಾರ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ.
ಈಗಾಗಲೇ ಗುರುತಿಸಲಾದ 15 ಪಾಯಿಂಟ್ ಗಳು ಮಾತ್ರವಲ್ಲದೆ, ದೂರುದಾರ ತೋರಿಸಿದ ಎಲ್ಲಾ ಸ್ಥಳಗಳಲ್ಲಿಯೂ ಶೋಧಕಾರ್ಯ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
15 ಮಾತ್ರವಲ್ಲ, ಮತ್ತಷ್ಟು ಸ್ಥಳಗಳಲ್ಲೂ ಎಸ್ಐಟಿ ಹುಡುಕಾಟ ನಡೆಸಲಿದೆ. ಅಲ್ಲದೆ 13ನೇ ಪಾಯಿಂಟ್ ನಲ್ಲಿ ಶೋಧಕ್ಕೆ ಜಿಪಿಆರ್ ಬಳಸಲು ನಿರ್ಧಾರ ಕೈಗೊಳ್ಳಲಾಗಿದೆ. ಜಿಪಿಆರ್ ಯಂತ್ರ ಬಂದ ನಂತರ 13ನೇ ಪಾಯಿಂಟ್ ಗೆ ಎಸ್ಐಟಿ ಆಗಮಿಸಲಿದೆ. ಈ ಕುರಿತಾಗಿ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರು ಗೃಹ ಸಚಿವ ಪರಮೇಶ್ವರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ದೂರುದಾರನಿಗೆ ಸ್ಥಳ ಗುರುತಿಸಲು ಒಂದಿಷ್ಟು ಗೊಂದಲವಾಗಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.