HomeLatest NewsBREAKING: ಧರ್ಮಸ್ಥಳದಲ್ಲಿ ದೂರುದಾರ ತೋರಿಸುವ ಮತ್ತಷ್ಟು ಸ್ಥಳಗಳಲ್ಲೂ ಅಸ್ಥಿಪಂಜರಗಳಿಗೆ ಇನ್ನೂ ಒಂದು ವಾರ ಶೋಧ

BREAKING: ಧರ್ಮಸ್ಥಳದಲ್ಲಿ ದೂರುದಾರ ತೋರಿಸುವ ಮತ್ತಷ್ಟು ಸ್ಥಳಗಳಲ್ಲೂ ಅಸ್ಥಿಪಂಜರಗಳಿಗೆ ಇನ್ನೂ ಒಂದು ವಾರ ಶೋಧ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದಲ್ಲಿ ಇನ್ನೂ ಒಂದು ವಾರ ಅಸ್ಥಿಪಂಜರಗಳಿಗಾಗಿ ಶೋಧ ಕಾರ್ಯ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ.

ಈಗಾಗಲೇ ಗುರುತಿಸಲಾದ 15 ಪಾಯಿಂಟ್ ಗಳು ಮಾತ್ರವಲ್ಲದೆ, ದೂರುದಾರ ತೋರಿಸಿದ ಎಲ್ಲಾ ಸ್ಥಳಗಳಲ್ಲಿಯೂ ಶೋಧಕಾರ್ಯ ನಡೆಸಲು ಎಸ್ಐಟಿ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

15 ಮಾತ್ರವಲ್ಲ, ಮತ್ತಷ್ಟು ಸ್ಥಳಗಳಲ್ಲೂ ಎಸ್ಐಟಿ ಹುಡುಕಾಟ ನಡೆಸಲಿದೆ. ಅಲ್ಲದೆ 13ನೇ ಪಾಯಿಂಟ್ ನಲ್ಲಿ ಶೋಧಕ್ಕೆ ಜಿಪಿಆರ್ ಬಳಸಲು ನಿರ್ಧಾರ ಕೈಗೊಳ್ಳಲಾಗಿದೆ. ಜಿಪಿಆರ್ ಯಂತ್ರ ಬಂದ ನಂತರ 13ನೇ ಪಾಯಿಂಟ್ ಗೆ ಎಸ್ಐಟಿ ಆಗಮಿಸಲಿದೆ. ಈ ಕುರಿತಾಗಿ ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರು ಗೃಹ ಸಚಿವ ಪರಮೇಶ್ವರ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ದೂರುದಾರನಿಗೆ ಸ್ಥಳ ಗುರುತಿಸಲು ಒಂದಿಷ್ಟು ಗೊಂದಲವಾಗಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular