HomeKarnatakaBREAKING : ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತಮುತ್ತಾ 5 ದಿನ 144 ಸೆಕ್ಷನ್ ಜಾರಿ..!

BREAKING : ಬೆಂಗಳೂರಿನ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತಮುತ್ತಾ 5 ದಿನ 144 ಸೆಕ್ಷನ್ ಜಾರಿ..!

ಬೆಂಗಳೂರು : ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಸುತ್ತಾಮುತ್ತಾ ಶಾಮಿಯಾನ ಹಾಕಿಸಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು, ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ  5 ದಿನ  144 ಸೆಕ್ಷನ್ ಜಾರಿ ಮಾಡಲಾಗಿದೆ.

ನಗರದ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತಾಮುತ್ತಾ ದರ್ಶನ್ ಅಭಿಮಾನಿಗಳು ದೌಡಾಯಿಸುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

. ಠಾಣೆಯಲ್ಲಿ ನಡೆಯುವ ಯಾವುದೇ ಚಟುವಟಿಕೆಗಳು ಕಾಣದಂತೆ ಸುತ್ತಾಮುತ್ತಾ ಶಾಮಿಯಾನ ಹಾಕಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳು ಶಾಮಿಯಾನ ಹಾಕಿಸಿದ್ದಾರೆ. ಹೌದು. ಪೊಲೀಸ್ ಠಾಣೆಯಲ್ಲಿ ನಡೆಯುವ ಯಾವುದೇ ಚಟುವಟಿಕೆಗಳು ಹೊರಗಡೆ ಕಾಣಬಾರದು ಎಂದು ಪೊಲೀಸ್ ಠಾಣೆ ಸುತ್ತಾಮುತ್ತಾ ಶಾಮಿಯಾನ ಅಳವಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸ್ ಠಾಣೆ ಮುಂದೆ ಜಮಾಯಿಸಿದ ನಟ ದರ್ಶನ್ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ನಿನ್ನೆ ನಡೆದಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮತ್ತು ಸಹಚರರನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಕೊಲೆ ನಡೆದ ಸ್ಥಳ ಪಟ್ಟಣಗೆರೆ ಶೆಡ್ ಗೆ ಆರೋಪಿಗಳನ್ನು ಕರೆದೊಯ್ದು ಪೊಲೀಸರು ನಿನ್ನೆ ಸ್ಥಳ ಮಹಜರು ನಡೆಸಿದ್ದಾರೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular