HomeKarnatakaBREAKING : ರಾಗಿಗುಡ್ಡ-ಶಾಂತಿನಗರ ಹೊರತುಪಡಿಸಿ ಶಿವಮೊಗ್ಗದಲ್ಲಿ `144 ಸೆಕ್ಷನ್’ ಆದೇಶ ತೆರವು

BREAKING : ರಾಗಿಗುಡ್ಡ-ಶಾಂತಿನಗರ ಹೊರತುಪಡಿಸಿ ಶಿವಮೊಗ್ಗದಲ್ಲಿ `144 ಸೆಕ್ಷನ್’ ಆದೇಶ ತೆರವು

ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಆಚರಣೆ ಸಂದರ್ಭದಲ್ಲಿ ದಿ: 01-10-2023 ರಂದು ರಾಗಿಗುಡ್ಡದಲ್ಲಿ ಕಲ್ಲುತೂರಾಟ ನಡೆದ ಹಿನ್ನೆಲೆ ಪರಿಸ್ಥಿತಿ ಸೂಕ್ಷ್ಮತೆಯಿಂದ ಕೂಡಿದ ಕಾರಣ ಮಹಾನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪ್ರಸ್ತುತ ನಗರದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿರುವುದರಿಂದ ರಾಗಿಗುಡ್ಡ-ಶಾಂತಿನಗರ ವ್ಯಾಪ್ತಿಯನ್ನು ಹೊರತುಪಡಿಸಿ ಶಿವಮೊಗ್ಗ ಮಹಾನಗರಪಾಲಿಕೆಯ ಇತರೆ ಪ್ರದೇಶದಲ್ಲಿ ಕಲಂ 144 ಆದೇಶವನ್ನು ತೆರವುಗೊಳಿಸಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.

ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ದಿ: 08-10-2023 ರಿಂದ ಮುಂದಿನ ಆದೇಶದವರೆಗೆ ನಿಬಂಧನೆಗಳನ್ನು ವಿಧಿಸಿ ಕಲಂ 144 ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular