BREAKING : ಸಂಸತ್ ನಲ್ಲಿ ಭದ್ರತಾ ಉಲ್ಲಂಘನೆ ಪ್ರಕರಣ : 6 ರಾಜ್ಯಗಳಲ್ಲಿ ‘ದೆಹಲಿ ಪೊಲೀಸ್ ವಿಶೇಷ ಸೆಲ್’ ತಂಡದಿಂದ ತನಿಖೆ

ನವದೆಹಲಿ : ಸಂಸತ್ ಮೇಲಿನ ಹೊಗೆ ಬಾಂಬ್ ದಾಳಿ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.ಇದೀಗ ಭದ್ರತಾ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸಲು 6 ರಾಜ್ಯಗಳಲ್ಲಿ ದೆಹಲಿ ಪೊಲೀಸ್ ವಿಶೇಷ ಸೆಲ್ ತಂಡಗಳು ಫೀಲ್ಡ್ ಗೆ ಇಳಿದಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಶೇಷ ಸೆಲ್ ತಂಡಗಳು 6 ರಾಜ್ಯದಲ್ಲಿ ಪ್ರಕರಣದ ತನಿಖೆ ನಡೆಸಲಿದೆ.

ಡಿಸೆಂಬರ್ 13 ರಂದು ನಡೆದ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಯ ತನಿಖೆಗಾಗಿ ದೆಹಲಿ ಪೊಲೀಸ್ ವಿಶೇಷ ಘಟಕದ ತಂಡಗಳು ರಾಜಸ್ಥಾನ, ಹರಿಯಾಣ, ಕರ್ನಾಟಕ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತನಿಖೆ ನಡೆಸಲಿದೆ.

ಸಂಸತ್ ಭವನದಲ್ಲಿ ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ಭದ್ರತಾ ಲೋಪ ಎದುರಾಗಿತ್ತು, ಇಬ್ಬರು ಅಪರಿಚಿತರು ಲೋಕಸಭೆಯಿಂದ ಗ್ಯಾಲರಿಯಿಂದ ಸಂಸದರು ಕುಳಿತುಕೊಳ್ಳುವ ಸ್ಥಳಕ್ಕೆ ನೆಗೆದು ಕುರ್ಚಿಯಿಂದ ಕುರ್ಚಿಗೆ ಎಗರುತ್ತಾ ಬಣ್ಣಗಳ ಹೊಗೆ ಬರುವ ವಸ್ತುಗಳನ್ನ ಸಿಡಿಸಿದ್ದರು. ಇದರಿಂದ ಬೆದರಿದ ಸಂಸದರು ಸಂಸತ್ ಭವನದಿಂದ ಹೊರಗೆ ಓಡಿ ಹೋಗಿದ್ದರು. ಅಲ್ಲದೇ ಸಂಸತ್ ಭವನದ ಹೊರಗಡೆ ಇಬ್ಬರು ಹೊಗೆ ಸೂಸುವ ಡಬ್ಬಿಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು. ಪ್ರಕರಣ ಸಂಬಂಧ ಇದುವರೆಗೆ 6 ಮಂದಿಯನ್ನು ಬಂಧಿಸಲಾಗಿದೆ.

ಸಂಸತ್ ದಾಳಿ ಗಂಭೀರ ವಿಷಯವಾಗಿದ್ದು, ಇದರ ಹಿಂದಿನ ಉದ್ದೇಶ ಗೊತ್ತಾಗಬೇಕು , ದಾಳಿ ಹಿಂದಿನ ವ್ಯಕ್ತಿಗಳು/ಸಂಘಟನೆಗಳು ಹಾಗೂ ಅವರ ಉದ್ದೇಶ ಏನು ಎಂಬುದು ಸಂಪೂರ್ಣವಾಗಿ ಬಹಿರಂಗವಾಗಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read