ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾರ ಮೂಲದ ಸೆಕ್ಯೂರಿಟಿ ಗಾರ್ಡ್ ಪಿಂಟು(22) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ.
ರಾಜಾಜಿನಗರದ ಹರಿಶ್ಚಂದ್ರ ಘಾಟ್ ಬಳಿ ಬ್ಯಾಂಕ್ ನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೇಲಿಂಗ್ಸ್ ಗೆ ನೇಣು ಬಿಗಿದುಕೊಂಡು ಪಿಂಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಐಎಸ್ ಸೆಕ್ಯೂರಿಟಿ ಏಜೆನ್ಸಿಯಲ್ಲಿ ಪಿಂಟು ಕೆಲಸ ಮಾಡುತ್ತಿದ್ದರು. ಸಂಜೆ 5.30ರ ಸುಮಾರಿಗೆ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ನಗರ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

