, ನವದೆಹಲಿ : ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ. ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಎಲ್ ಕೆ ಅಡ್ವಾಣಿ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
ಅನಾರೋಗ್ಯದ ಹಿನ್ನೆಲೆ ಅವರು ಇತ್ತೀಚೆಗೆ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಸದ್ಯ ಅವರು ದೆಹಲಿಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಎಲ್.ಕೆ. ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆಗೆ ಧಾವಿಸಿ ಚಿಕಿತ್ಸೆ ಕೊಡಿಸಿದ ಬಳಿಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ಕೂಡ ದಾಖಲಿಸಲಾಗಿತ್ತು. ಜೂನ್ 27ರಂದು ಅವರನ್ನು ಬಿಡುಗಡೆ ಮಾಡಲಾಗಿತ್ತು. ಇಲ್ಲಿ ಎಲ್.ಕೆ.ಅಡ್ವಾಣಿ ಅವರನ್ನು ಮೂತ್ರಶಾಸ್ತ್ರ, ಹೃದ್ರೋಗ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ತಜ್ಞರು ಪರೀಕ್ಷಿಸಿದರು. ವಯೋಸಹಜ ಕಾಯಿಲೆಗಳಿಂದಾಗಿ ಅಡ್ವಾಣಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡಿದ್ದೇವೆ ಎಂದು ಏಮ್ಸ್ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದರು.
After being discharged from hospital, veteran BJP leader LK Advani is stable, healthy and resting at home.
(file pic) pic.twitter.com/JAJi4TodKm
— ANI (@ANI) July 6, 2024

