ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಎಡಿಜಿಪಿಯಿಂದ ಡಿಜಿಪಿ ಹುದ್ದೆಗೆ ಬಡ್ತಿ ನೀಡಲಾಗಿದೆ.
ಅಲೋಕ್ ಕುಮಾರ್ ಅವರಿಗೆ ಬಡ್ತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ. ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ಅಲೋಕ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಕಾರಾಗೃಹ ಎಡಿಜಿಪಿಯಾಗಿದ್ದ ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಪೊಲೀಸ್ ತರಬೇತಿ ಇಲಾಖೆಯ ಎಡಿಜಿಪಿಯಾಗಿ ದಯಾನಂದ್ ವರ್ಗಾವಣೆಯಾಗಿದ್ದಾರೆ. ಅಲೋಕ್ ಕುಮಾರ್ ಗೆ ಬಡ್ತಿ ಹಿನ್ನೆಲೆ ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದೆ.
