HomeLatest NewsBREAKING: ರಾಜ್ಯದಲ್ಲಿ 3 ದಿನ ಭಾರೀ ಚಳಿ, ಶೀತಗಾಳಿ ಅಲರ್ಟ್

BREAKING: ರಾಜ್ಯದಲ್ಲಿ 3 ದಿನ ಭಾರೀ ಚಳಿ, ಶೀತಗಾಳಿ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಭಾರಿ ಚಳಿ ಶೀತ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಚಳಿಗಾಲದ ಕುರಿತು ಮಾಹಿತಿ ನೀಡಿದೆ.

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಶೀತ ಗಾಳಿ ಅಲರ್ಟ್ ನೀಡಲಾಗಿದೆ. ಇಂದಿನಿಂದ ಮೂರು ದಿನ ಭಾರಿ ಚಳಿಯ ಜೊತೆಗೆ ಶೀತ ಗಾಳಿ ಸಾಧ್ಯತೆ ಇದೆ. ಕಲಬುರಗಿ, ವಿಜಯಪುರ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಿಗೆ ಶೀತ ಗಾಳಿ ಅಲರ್ಟ್ ನೀಡಲಾಗಿದೆ.

ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಕನಿಷ್ಠ ತಾಪಮಾನ 12ರಿಂದ 13 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಜ್ಯದಲ್ಲಿ ಕನಿಷ್ಠ ತಾಪಮಾನಕ್ಕೆ ಲಾ ನೀನೋ ಕಂಡೀಶನ್ ಹಾಗೂ ಉತ್ತರ ಭಾರತದಿಂದ ಒಣ ಹವೆ ಶುರುವಾಗಿರುವುದರಿಂದ ಚಳಿ ಹೆಚ್ಚಾಗಿದೆ. ಡಿಸೆಂಬರ್ 17ರ ನಂತರ ಚಳಿ ಕಡಿಮೆಯಾಗಿ ತಾಪಮಾನ ಏರಿಕೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಕ್ಕಳು, ವಯಸ್ಸಾದವರು ಮುಂಜಾನೆ ವಾಕ್ ಮಾಡುವುದು ಬೇಡ. ಬಿಸಿನೀರು, ಸಮತೋಲನ ಆಹಾರ, ಉಣ್ಣೆ ಬಟ್ಟೆ ಧರಿಸುವುದು ಉತ್ತಮ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular