ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ನಾಲ್ಕು ದಿನ ತೀವ್ರ ಶೀತಗಾಳಿಯ ಎಚ್ಚರಿಕೆ ನೀಡಲಾಗಿದೆ. ಕಲಬುರಗಿ ಜಿಲ್ಲಾಡಳಿತದಿಂದ ತೀವ್ರ ಶೀತ ಗಾಳಿಯ ಎಚ್ಚರಿಕೆ ನೀಡಲಾಗಿದೆ.
ನವೆಂಬರ್ 20ರವರೆಗೆ ಜಿಲ್ಲೆಯಲ್ಲಿ ತೀವ್ರ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಸಾಮಾನ್ಯಕ್ಕಿಂತ ನಾಲ್ಕರಿಂದ ಆರು ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆ ತಾಪಮಾನ ಇರಲಿದೆ. ಅಗತ್ಯವಾಗಿ ಅನಗತ್ಯವಾಗಿ ಹೊರಗೆ ಬರದಂತೆ, ಪ್ರವಾಸ ಮಾಡದಂತೆ ಸೂಚನೆ ನೀಡಲಾಗಿದೆ.
ಜಿಲ್ಲೆಯ ಜನತೆಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೂಚನೆ ನೀಡಿದ್ದಾರೆ. ಶೀತ ಗಾಳಿಯಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸಲಹೆ ನೀಡಲಾಗಿದೆ. ವೃದ್ಧರು ಮತ್ತು ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
