BREAKING : ‘ಲೈಂಗಿಕ ದೌರ್ಜನ್ಯ’ ಆರೋಪ ಕೇಸ್ : ಬಿಜೆಪಿ ನಾಯಕ ‘ಅರುಣ್ ಪುತ್ತಿಲ್’ ಗೆ ಜಾಮೀನು ಮಂಜೂರು

ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಎಫ್ಐಆರ್ ದಾಖಲಿಸಲಾಗಿತ್ತು. ನಂತರ ಅರುಣ್ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜೆಎಂಎಫ್ ಸಿ ಕೋರ್ಟ್ ಗೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ಇಂದು ವಿಚಾರಣೆ ನಡೆಸಿದ ಕೋರ್ಟ್ ಅರುಣ್ ಪುತ್ತಿಲ್ ಗೆ ಜಾಮೀನು ಮಂಜೂರು ಮಾಡಿದೆ.
ಈ ಸಂಬಂಧ 47 ವರ್ಷದ ಮಹಿಳೆ ದೂರು ನೀಡಿದ್ದು, ಅರುಣ್ ಕುಮಾರ್ ಪುತ್ತಿಲ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

2023ರಲ್ಲಿ ಬೆಂಗಳೂರಿನ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಫೋಟೋ, ಸೆಲ್ಫಿ, ವಿಡಿಯೋ ಮಾಡಿದ್ದಾರೆ. ಅವುಗಳನ್ನು ತೋರಿಸಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು.

ಪುತ್ತೂರು ವಿಧಾನಸಭಾ ಚುನಾವಣೆಯಲ್ಲಿ ಹಿಂದುತ್ವದ ಹೆಸರಲ್ಲಿ ಬಿಜೆಪಿ ವಿರುದ್ಧ ಬಂಡಾಯವಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅಭಿಮಾನಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪರಿಚಿತರಾಗಿದ್ದು, ನಂತರ ಬೆಂಗಳೂರಿಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಹೇಳಲಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read