HomeKarnatakaBREAKING : ಲೈಂಗಿಕ ದೌರ್ಜನ್ಯ ಪ್ರಕರಣ ; ಶಾಸಕ H.D ರೇವಣ್ಣಗೆ ಜಾಮೀನು ಮಂಜೂರು

BREAKING : ಲೈಂಗಿಕ ದೌರ್ಜನ್ಯ ಪ್ರಕರಣ ; ಶಾಸಕ H.D ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು : ಲೈಂಗಿಕ ದೌರ್ಜನ್ಯ  ಆರೋಪ  ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು ಮಂಜೂರು ಆಗಿದೆ.

ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್  ಜಾಮೀನು ನೀಡಿ  ಆದೇಶ ಹೊರಡಿಸಿದೆ. 5 ಲಕ್ಷ ಬಾಂಡ್, ಒಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್ ಸೂಚನೆ ನೀಡಿದೆ.

ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಜಾಮೀನು ಕೋರಿ ಹೆಚ್.ಡಿ.ರೇವಣ್ಣ ಕೋರ್ಟ್ ಮೊರೆ ಹೋಗಿದ್ದರು. ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಅರ್ಜಿ ವಿಚಾರಣೆ ನಡೆಸಿ ಮೇ 16ರಂದು ಇಂದು ಮಧ್ಯಾಹ್ನದವರೆಗೂ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ನಂತರ ಮತ್ತೆ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಎಸ್ಐಟಿ ಪರ ವಕೀಲರ ಹಾಗೂ ರೇವಣ್ಣ ಪರ ವಕೀಲರ ವಾದ-ಪ್ರತಿವಾದ ಆಲಿಸಿತ್ತು. ಈ ವೇಳೆ ಮೇ 20ಕ್ಕೆ ಜಾಮೀನು ಅರ್ಜಿ ಆದೇಶವನ್ನು ಕಾಯ್ದಿರಿಸಿದ ಕೋರ್ಟ್, ಸೋಮವಾರದವರೆಗೂ ರೇವಣ್ಣಗೆ ಮಧ್ಯಂತರ ಜಾಮೀನು ಮುಂದುವರೆಯಲಿದೆ ಎಂದು ತಿಳಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular