ಕಲಬುರಗಿ : ವಿದ್ಯಾರ್ಥಿಗಳನ್ನು ತಿದ್ದಿ ಬುದ್ದಿ ಹೇಳಬೇಕಾದ ಶಿಕ್ಷಕರು ದಾರಿ ತಪ್ಪಿದರೆ ಹೇಗೆ..? ಹೌದು. ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕ ಅಂದರ್ ಆದ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ. ಸರ್ಕಾರಿ ಕಾಲೇಜಿನ ಉಪನ್ಯಾಸಕ ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ.
ಹೊಸ ವರ್ಷಕ್ಕೆ ವಿದ್ಯಾರ್ಥಿನಿಗೆ ಗಿಫ್ಟ್ ಕೊಡುವ ನೆಪದಲ್ಲಿಕಾಲೇಜಿಗೆ ಬೇಗ ಬರುವಂತೆ ಹೇಳಿ ವಿದ್ಯಾರ್ಥಿನಿಯನ್ನು ಕರೆಸಿಕೊಂಡ ಉಪನ್ಯಾಸಕ ರಾಜ ಕುಮಾರ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾರೆ.
ಸರ್ಕಾರಿ ಕಾಲೇಜಿನಲ್ಲಿ ಅರ್ಥಶಾಸ್ತ್ರ ಬೋಧನೆ ಮಾಡುತ್ತಿದ್ದ ಶಿಕ್ಷಕ ಈ ಕೃತ್ಯ ಎಸಗಿದ್ದಾನೆ. ಈ ಸಂಬಂಧ ಅಫಜಲಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.ಶಿಕ್ಷಕರು ದಾರಿ ತಪ್ಪಿದರೆ ಮಕ್ಕಳ ಭವಿಷ್ಯ ಕತ್ತಲೆಯಾಗುತ್ತದೆ. ಶಿಕ್ಷಕರು ಬೆಳಕಿನ ದಾರಿ ತೋರಿಸುವವರಾಗಿರಬೇಕು. ಮಕ್ಕಳನ್ನು ಸರಿ ದಾರಿಗೆ ತರಬೇಕಾದ ಉಪನ್ಯಾಸಕರೇ ಇಂತಹ ಕೆಲಸ ಮಾಡಿದರೆ ಹೇಗೆ ಎಂದು ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ.

