ಬೆಂಗಳೂರು: ಪಿಜಿಗೆ ನುಗ್ಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ಕೆ.ನರೇಶ್ ಎಂಬಾತ ಎಲೆಕ್ಟ್ರಾನಿಕ್ ಸಿಟಿಯಲ್ಲಿ ವಾಸವಾಗಿದ್ದನು. ಕಳ್ಳತನ ಮಾಡಲು ಪಿಜಿಗೆ ನುಗ್ಗಿದ್ದ ನರೇಶ್ ಯುವತಿ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದನು. ಸುದ್ದಗುಂಟೆಪಾಳ್ಯದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಸುದ್ದಗುಂಟೆಪಾಳ್ಯದ ಬಳಿಯಿರುವ ಪಿಜಿಗೆ ನುಗ್ಗಿದ ಕಳ್ಳ, ಕೊಠಡಿಯಲ್ಲಿ ಮಲಗಿದ್ದ ಯುವತಿಯ ಮೈ-ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದನು. ಯುವತಿ ಪ್ರತಿರೋಧಿಸುತ್ತಿದ್ದಂತೆ 2,500 ರೂಪಾಯಿ ಎಗರಿಸಿ ಎಸ್ಕೇಪ್ ಆಗಿದ್ದನು. ಘಟನೆ ಬಗ್ಗೆ ಯುವತಿ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಆರೋಪಿ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಇದೀಗ ಆರೋಪಿಯ ಬಂಧನವಾಗಿದೆ.