ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಶಾಸಕರಾದ ಶಾಮನೂರು ಶಿವಶಂಕರಪ್ಪ(94) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಶಾಮನೂರು ಶಿವಶಂಕರಪ್ಪ ನಿಧನದ ಹಿನ್ನೆಲೆಯಲ್ಲಿ ನಾಳೆ ದಾವಣಗೆರೆ ವಿಶ್ವವಿದ್ಯಾಲಯಕ್ಕೆ, ವಿವಿಯ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ವಿಶ್ವವಿದ್ಯಾಲಯ ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆ ಘೋಷಣೆ ಮಾಡಲಾಗಿದ್ದು, ನಾಳೆ ನಿಗದಿಯಾಗಿದ್ದ ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ನಾಳೆ ರಜೆ, ಪರೀಕ್ಷೆ ಮುಂದೂಡಿಕೆ ಬಗ್ಗೆ ದಾವಣಗೆರೆ ವಿವಿ ಕುಲಪತಿ ಪ್ರೊ. ಬಿ.ಡಿ. ಕುಂಬಾರ್ ಮಾಹಿತಿ ನೀಡಿದ್ದಾರೆ.

