BREAKING : ಕರ್ನಾಟಕಕ್ಕೆ ಶಾಕ್ : ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸಲು ‘CWRC’ ಆದೇಶ

ನವದೆಹಲಿ : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ( CWRC) ಸೂಚನೆ ನೀಡಿದೆ.

ಇಂದು ದೆಹಲಿಯಲ್ಲಿ ನಡೆದ ಸಭೆಯಲ್ಲಿ  ನವೆಂಬರ್ 23 ರಿಂದ ಡಿ.23 ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದ್ದು, ಸುಪ್ರೀಂಕೋರ್ಟ್ ಆದೇಶ ಪಾಲಿಸಲು ಸಿಡಬ್ಲ್ಯುಆರ್ಸಿ ( CWRC)  ಸೂಚನೆ ನೀಡಿದೆ.

ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ರಾಜ್ಯದ ಪರ ಅಧಿಕಾರಿಗಳು ವಾದ ಮಂಡಿಸಿದ್ದರು. ಆದರೂ ರಾಜ್ಯಕ್ಕೆ ಹಿನ್ನಡೆಯಾಗಿದ್ದು, ಮತ್ತೆ ತಮಿಳುನಾಡಿಗೆ ನೀರು ಹರಿಸುವಂತೆ ಸೂಚನೆ ನೀಡಿದೆ.

ಇತ್ತೀಚೆಗೆ ನವೆಂಬರ್ 1ರಿಂದ 23ವರೆಗೆ ಪ್ರತಿದಿನ ತಮಿಳುನಾಡಿಗೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಆದೇಶ ನೀಡಿತ್ತು, ಇದೀಗ ಮತ್ತೆ ನವೆಂಬರ್ 23 ರಿಂದ ಡಿ.23 ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ನಿರ್ದೇಶನ ನೀಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read