ಬೆಂಗಳೂರು: ವೇತನ ಹೆಚ್ಚಳ, ವೇತನ ಹೆಚ್ಚಳದ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರದಲ್ಲಿ ಭಾಗಿಯಾಗಿದ್ದ ಸಾರಿಗೆ ಸಂಸ್ಥೆಗೆ ಸಿಬ್ಬಂದಿಗೆ ನೋಟಿಸ್ ನೀಡಿದೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ(NWKRTC) ನೋಟಿಸ್ ನೀಡಲಾಗಿದೆ. 3000ಕ್ಕೂ ಹೆಚ್ಚು ಸಾರಿಗೆ ಸಿಬ್ಬಂದಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ 7 ಜಿಲ್ಲೆಯ 11 ವಿಭಾಗದ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ. 2787 ಚಾಲಕರು, ನಿರ್ವಾಹಕರು, 420 ಮೆಕಾನಿಕ್ ಗಳು, 78 ಆಡಳಿತ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.
ಕರ್ತವ್ಯಕ್ಕೆ ಹಾಜರಾಗದೆ ಸಿಬ್ಬಂದಿ ಮುಷ್ಕರದಲ್ಲಿ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿದೆ. ಜೊತೆಗೆ ಮುಷ್ಕರದ ಕಾರಣದಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಎರಡು ಕೋಟಿ ರೂಪಾಯಿ ನಷ್ಟವಾಗಿದೆ ಎನ್ನಲಾಗಿದೆ.