BREAKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ: 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪ ಕೇಳಿಬಂದಿದೆ. 7 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಪೋಷಕರು ದೂರು ನೀಡಿದ್ದಾರೆ.

ಚಿಪ್ಸ್ ಕೊಳ್ಳಲು ಅಂಗಡಿಗೆ ತೆರಳಿದಾಗ ಲೈಂಗಿಕ ಕಿರುಕುಳ ನೀಡಲಾಗಿದೆ. ಆರೋಪಿ ಚಿಪ್ಸ್ ಕೊಡಿಸುವುದಾಗಿ ಕರೆದೊಯ್ದು ಗೋದಾಮಿನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಬಾಲಕಿ ಪೋಷಕರು ಬಾಗಲಗುಂಟೆ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ಹಿನ್ನೆಲೆಯಲ್ಲಿ ಕೇರಳ ಮೂಲದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read