BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಬಾಲಕನ ಅಪಹರಿಸಿ ಕತ್ತು ಸೀಳಿ ಹತ್ಯೆ, ಆರೋಪಿಗಳ ಮೇಲೆ ಫೈರಿಂಗ್

ಬೆಂಗಳೂರು: ಬೆಂಗಳೂರು ನಗರದ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರೊಬ್ಬರ ಪುತ್ರನನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಪ್ರಕರಣ ದಾಖಲಾದ ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಮಾಡಿದ್ದಾರೆ.

ಅರಕೆರೆಯ ವಿಜಯ ಬ್ಯಾಂಕ್ ಕಾಲೋನಿಯ ಜೆ.ಸಿ. ಅಶ್ವತ್ಥ್ ಅವರ ಪುತ್ರ ನಿಶ್ಚಿತ್(13) ಹತ್ಯೆಯಾದ ಬಾಲಕ. ಮನೆಯ ಸಮೀಪ ಟ್ಯೂಷನ್ ಗೆ ಹೋಗಿ ಮರಳುವಾಗ ಗುರುವಾರ ಸಂಜೆ 7:30ಕ್ಕೆ ಆತನನ್ನು ಅಪಹರಿಸಿದ ದುಷ್ಕರ್ಮಿಗಳು ಬನ್ನೇರುಘಟ್ಟ ರಸ್ತೆಯ ಸಮೀಪ ಕತ್ತು ಸೀಳಿ ಕೊಲೆ ಮಾಡಿ ಶವಕ್ಕೆ ಬೆಂಕಿ ಹಚ್ಚಿದ್ದಾರೆ.

ಟ್ಯೂಷನ್ ಗೆ ಹೋಗಿದ್ದ ಬಾಲಕ ಮನೆಗೆ ಬಾರದಿದ್ದಾಗ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣೆ ಡಿಸಿಪಿ ನಾರಾಯಣ್ ಸೇರಿದಂತೆ ಹಿರಿಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಪೋಷಕರಿಗೆ ಕರೆ ಮಾಡಿದ್ದ ಅಪಪಹರಣಕಾರರು ಹಣಕ್ಕೆ ಒತ್ತಾಯಿಸಿದ್ದರು. ಆದರೆ, ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚುವ ವೇಳೆಗೆ ಕೊಲೆ ಮಾಡಿದ್ದಾರೆ.

ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ 6 ಸುತ್ತು ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿದೆ.

ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಎಂಬುವರನ್ನು ಬಂಧಿಸಲಾಗಿದೆ. ಇನ್ಸ್ಪೆಕ್ಟರ್ ಕುಮಾರಸ್ವಾಮಿ ಮತ್ತು ಪಿಎಸ್ಐ ಅರವಿಂದ ಕುಮಾರ್ ಫೈರಿಂಗ್ ಮಾಡಿದ್ದಾರೆ. ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಹಣಕ್ಕಾಗಿ ದುಷ್ಕರ್ಮಿಗಳು 13 ವರ್ಷದ ಬಾಲಕ ನಿಶ್ಚಿತ್ ಕೊಲೆ ಮಾಡಿ ಶವ ಸುಟ್ಟು ಹಾಕಿದ್ದರು. ಆನೇಕಲ್ ತಾಲೂಕು ವ್ಯಾಪ್ತಿಯ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿತ್ತು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಲಕನೇ ಕೃತ್ಯದ ಹಿಂದಿದ್ದಾನೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read