ಬೆಂಗಳೂರು: ಚಾರ್ಜ್ ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಸ್ಪೋಟಗೊಂಡು ಕಟ್ಟಡಕ್ಕೆ ಬೆಂಕಿ ತಗುಲಿದ ಘಟನೆ ಬೆಂಗಳೂರಿನ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ನಡೆದಿದೆ.
ಮುಖೇಶ್ ಎಂಬುವವರಿಗೆ ಸೇರಿದ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಬಸವೇಶ್ವರನಗರದ ಶಿವನಹಳ್ಳಿಯ ಮನೆ ಬೇಸ್ ಮೆಂಟ್ ನಲ್ಲಿ ಘಟನೆ ನಡೆದಿದೆ. ಬೇಸ್ಮೆಂಟ್ ನಲ್ಲಿ ಚಾರ್ಜ್ ಗೆ ಹಾಕಿದ ವೇಳೆ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡಿದೆ. ಸ್ಪೋಟಗೊಂಡು ಬೆಂಕಿ ತಗುಲಿದ್ದು, ಪಕ್ಕದಲ್ಲಿದ್ದ ಸೈಕಲ್ ಸುಟ್ಟು ಕರಕಲಾಗಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.