HomeLatest NewsBREAKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಚಾರ್ಜ್ ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಸ್ಪೋಟ: ಕಟ್ಟಡಕ್ಕೆ...

BREAKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಚಾರ್ಜ್ ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಸ್ಪೋಟ: ಕಟ್ಟಡಕ್ಕೆ ಬೆಂಕಿ

ಬೆಂಗಳೂರು: ಚಾರ್ಜ್ ಗೆ ಹಾಕಿದ್ದ ಎಲೆಕ್ಟ್ರಿಕ್ ಬೈಕ್ ಏಕಾಏಕಿ ಸ್ಪೋಟಗೊಂಡು ಕಟ್ಟಡಕ್ಕೆ ಬೆಂಕಿ ತಗುಲಿದ ಘಟನೆ ಬೆಂಗಳೂರಿನ ಬಸವೇಶ್ವರನಗರದ  ಶಿವನಹಳ್ಳಿಯಲ್ಲಿ ನಡೆದಿದೆ.

ಮುಖೇಶ್ ಎಂಬುವವರಿಗೆ ಸೇರಿದ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಬಸವೇಶ್ವರನಗರದ ಶಿವನಹಳ್ಳಿಯ ಮನೆ ಬೇಸ್ ಮೆಂಟ್ ನಲ್ಲಿ ಘಟನೆ ನಡೆದಿದೆ. ಬೇಸ್ಮೆಂಟ್ ನಲ್ಲಿ ಚಾರ್ಜ್ ಗೆ ಹಾಕಿದ ವೇಳೆ ಎಲೆಕ್ಟ್ರಿಕ್ ಬೈಕ್ ಸ್ಪೋಟಗೊಂಡಿದೆ. ಸ್ಪೋಟಗೊಂಡು ಬೆಂಕಿ ತಗುಲಿದ್ದು, ಪಕ್ಕದಲ್ಲಿದ್ದ ಸೈಕಲ್ ಸುಟ್ಟು ಕರಕಲಾಗಿದೆ. ಕಟ್ಟಡಕ್ಕೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಬಂದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular