ಬೆಂಗಳೂರು: ಬೆಂಗಳೂರಿನಲ್ಲಿ ರೌಡಿಶೀಟರ್ ಶಿವಕುಮಾರ್(40) ಕೊಲೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಹಲಸೂರು ಕೆರೆಯ ಬಳಿ ಮನೆಯ ಮುಂದೆ ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಮಾಡಲಾಗಿ.ದೆ ಮನೆಯ ಮುಂದೆ ನಿಂತಿದ್ದಾಗ ನಾಲ್ಕೈದು ದುಷ್ಕರ್ಮಿಗಳು ದಾಳಿ ಮಾಡಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಡಿಸಿಪಿ ಡಿ. ದೇವರಾಜ್, ಜಂಟಿ ಪೋಲಿಸ್ ಆಯುಕ್ತ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ರೌಡಿಶೀಟರ್ ಬಿಕ್ಲು ಶಿವ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.