ಬೆಂಗಳೂರು: ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊಂಗಸಂದ್ರ ನಿವಾಸಿ ಪ್ರಮೋದಾ(37) ಕೊಲೆಯಾದ ಮಹಿಳೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲದ ಪ್ರಮೋದಾ ಮತ್ತು ಆಕೆಯ ಅಕ್ಕನನ್ನು ಸುರೇಶ್ ಮದುವೆಯಾಗಿದ್ದ. ಸುರೇಶ್ ಮತ್ತು ಪ್ರಮೋದಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪ್ರಮೋದಾಗೆ ರಮೇಶ್ ಜೊತೆಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ.
ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಪ್ರಮೋದಾ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಪ್ರಮೋದಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
