HomeLatest NewsBREAKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ, ಏಕಾಏಕಿ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆ ಯತ್ನ

BREAKING: ಬೆಂಗಳೂರಲ್ಲಿ ಆಘಾತಕಾರಿ ಘಟನೆ, ಏಕಾಏಕಿ ಮೆಟ್ರೋ ಹಳಿಗೆ ಹಾರಿ ಯುವಕ ಆತ್ಮಹತ್ಯೆ ಯತ್ನ

ಬೆಂಗಳೂರು: ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ರೈಲ್ವೆ ನಿಲ್ದಾಣದಲ್ಲಿ ಹಸಿರು ಮಾರ್ಗದ ಕಡೆಗೆ ಹೋಗುವ ಟ್ರ್ಯಾಕ್ ಗೆ ಯುವಕನೊಬ್ಬ ಹಾರಿ ಆತ್ಮಹತ್ಯೆಗೆ ಮುಂದಾದ ಘಟನೆ ನಡೆದಿದೆ. ಇದರಿಂದ ಅರ್ಧ ಗಂಟೆಗೂ ಹೆಚ್ಚು ಕಾಲ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯವಾಗಿ ಪ್ರಯಾಣಿಕರು ಪರದಾಡಿದ್ದಾರೆ.

ರಾತ್ರಿ 10:15 ರ ಸುಮಾರಿಗೆ ಯುವಕನೊಬ್ಬ ಏಕಾಏಕಿ ಮೆಟ್ರೋ ಹಳಿಗೆ ಹಾರಿದ್ದಾನೆ. ತಕ್ಷಣವೇ ಭದ್ರತಾ ಸಿಬ್ಬಂದಿ ತುರ್ತು ಪರಿಸ್ಥಿತಿಯ ಇಟಿಎಸ್ ಬಟನ್ ಒತ್ತಿ ರೈಲು ನಿಲ್ಲಿಸಿದ್ದಾರೆ. ಗಾಯಗೊಂಡಿದ್ದ ಯುವಕನನ್ನು ಹೊರಗೆ ತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಭದ್ರತಾ ಮುಖ್ಯಸ್ಥ ಸೆಲ್ವಂ ಮಾಹಿತಿ ನೀಡಿದ್ದಾರೆ.

ರೈಲಿನ ಕೆಳಗೆ ಬಿದ್ದಿದ್ದ ವ್ಯಕ್ತಿಯನ್ನು ಮೆಟ್ರೋ ಸಿಬ್ಬಂದಿ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಯಾಣಿಕರಿಗೆ ತೊಂದರೆಯಾಗದಂತೆ ನಾಲ್ಕು ಟ್ರಿಪ್ ಗಳ ಶಾರ್ಟ್ ಲೂಪ್ ರೈಲುಗಳನ್ನು ಓಡಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular