ಬೆಂಗಳೂರು: ದೊಣ್ಣೆಯಿಂದ ಹೊಡೆದು, ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಯುವಕನನ್ನು ಕೊಲೆ ಮಾಡಿದ ಘಟನೆ ಬೆಂಗಳೂರಿನ ಬನ್ನೇರುಘಟ್ಟ ಸಮೀಪ ಗೊಲ್ಲಹಳ್ಳಿಗುಟ್ಟೆ ಮೈದಾನದ ಬಳಿ ನಡೆದಿದೆ.
ಕುಡಿದ ಮತ್ತಿನಲ್ಲಿ ಗಲಾಟೆ ನಡೆದು ನಂತರ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 23 ವರ್ಷದ ಯುವಕನನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತಲೆಯ ಮೇಲೆ ಇಟ್ಟಿಗೆ ಎತ್ತಿ ಹಾಕಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಲಾಗಿದೆ. ಯುವಕನ ಮೃತದೇಹ ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಮತ್ತು ಎಫ್ಎಸ್ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಯುವಕನ ಕೊಲೆಗೆ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

