BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ : ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ.!

ವಿಜಯಪುರ : ರಾಜ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮಕ್ಕಳಾದ ತನು ನಿಂಗರಾಜ್ ಭಜಂತ್ರಿ (5) ಹಸೇನ್ ನಿಂಗರಾಜ್ ಭಜಂತ್ರಿ (2) ರಕ್ಷಾ ನಿಂಗರಾಜ್ ಭಜಂತ್ರಿ (3) ಹಾಗೂ 3 ತಿಂಗಳ ಮಗು ಸಾವನ್ನಪ್ಪಿದೆ.

ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಎಡದಂಡೆ ಮುಖ್ಯ ಕಾಲುವೆಯಲ್ಲಿ ಈ ಘಟನೆ ನಡೆದಿದೆ.
ಮೃತರು ಕೊಲ್ಹಾರ ತೆಲಗಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ. ಕಾಲುವೆಗೆ ಜಿಗಿದಿದ್ದ ತಾಯಿ ಭಾಗ್ಯಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read