ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕಾಫ್ ಆಗುತ್ತಿದ್ದ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ.
ಟರ್ಮಿನಲ್ 1 ರಲ್ಲಿ ಬೆಂಗಳೂರಿನಿಂದ ಚೆನ್ನೈಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕಾಫ್ ಆಗುವಾಗ ಹೊಗೆ ಕಾಣಿಸಿಕೊಂಡಿದೆ. ಟೇಕಾಫ್ ಆಗುತ್ತಿದ್ದ ವಿಮಾನದ ಎಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡಿದ್ದು, ರನ್ ವೇನಲ್ಲೇ ಪೈಲಟ್ ವಿಮಾನ ನಿಲ್ಲಿಸಿದ್ದಾರೆ.
ಸ್ಥಳಕ್ಕೆ ಏರ್ಪೋರ್ಟ್ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯ ತಾಂತ್ರಿಕ ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಬೇರೆಡೆ ಶಿಫ್ಟ್ ಮಾಡಲಾಗಿದೆ.

