HomeKarnatakaBREAKING: ಕಚೇರಿಯಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆತ್ಮಹತ್ಯೆ

BREAKING: ಕಚೇರಿಯಲ್ಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆತ್ಮಹತ್ಯೆ

ತುಮಕೂರು: ತುಮಕೂರು ಜಿಲ್ಲೆ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ(59) ಕಚೇರಿಯಲ್ಲೇ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ. ನನ್ನ ತಾಯಿ, ಪತ್ನಿ, ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಕೃಷ್ಣಪ್ಪ ತೊಂದರೆ ಕೊಟ್ಟಿದ್ದರಿಂದ ನಾನು ಈ ನಿರ್ಧಾರಕ್ಕೆ ಬಂದಿದ್ದೇನೆ. ಆತನಿಗೆ ದೇವರು ಮತ್ತು ಕಾನೂನು ಶಿಕ್ಷೆ ಕೊಡುತ್ತದೆ ಎಂದು ವಿಡಿಯೋ ಮಾಡಿದ್ದಾರೆ ಎನ್ನಲಾಗಿದೆ.

ವಿಡಿಯೋ ಮಾಡಿಟ್ಟು ಮಲ್ಲಿಕಾರ್ಜುನ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ವರ್ಷದಿಂದ ಪಾವಗಡ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರ ಸೇವಾ ಅವಧಿ ಕೆಲವು ದಿನಗಳಲ್ಲಿ ಮುಕ್ತಾಯಗೊಳ್ಳುತ್ತಿತ್ತು ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular