ಮಡಿಕೇರಿ: ಪತ್ನಿಯ ಮೇಲೆ ಗುಂಡು ಹಾರಿಸಿ ಯೋಧ ಪರಾರಿಯಾದ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಸಮೀಪ ಕೋಣಗೇರಿ ಗ್ರಾಮದಲ್ಲಿ ನಡೆದಿದೆ.
ಬೊಳಂದಂಡ ದೀಪಿಕಾ ದೇಚಮ್ಮ(32) ಅವರ ಮೇಲೆ ಫೈರಿಂಗ್ ಮಾಡಲಾಗಿದೆ. ಗಾಯಾಳು ದೇಚಮ್ಮ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪತ್ನಿಯ ಮೇಲೆ ಗುಂಡು ಹಾರಿಸಿ ಯೋಧ ಪತಿ ವಿನು ಕಾರ್ಯಪ್ಪ ಪರಾರಿಯಾಗಿದ್ದಾರೆ. ಭಾರತೀಯ ಸೇನೆಯಲ್ಲಿ ವಿನು ಕಾರ್ಯಪ್ಪ ಕರ್ತವ್ಯದಲ್ಲಿದ್ದಾರೆ. ಸ್ಥಳಕ್ಕೆ ಶ್ರೀಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.