HomeLatest NewsBREAKING: ಜಗಳದ ವೇಳೆ ತಂದೆಗೆ ಚಾಕುವಿನಿಂದ ಇರಿದ ಪುತ್ರ

BREAKING: ಜಗಳದ ವೇಳೆ ತಂದೆಗೆ ಚಾಕುವಿನಿಂದ ಇರಿದ ಪುತ್ರ

ಬೆಳಗಾವಿ: ಸಹೋದರರ ಗಲಾಟೆಯ ವೇಳೆ ತಂದೆಗೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಘಟನೆ ನಡೆದಿದೆ.

ಜಗಳ ವಿಕೋಪಕ್ಕೆ ತಿರುಗಿ ತಂದೆಗೆ ಪುತ್ರ ಚಾಕುವಿನಿಂದ ಇರಿದಿದ್ದಾನೆ. ಬಸಯ್ಯ ಏಣಗಿಮಠ(65) ಅವರಿಗೆ ಐದು ಕಡೆ ವಿಜಯ್ ಇರಿದಿದ್ದಾನೆ. ತಂದೆಯ ಜೊತೆಗೆ ಕಿರಿಯ ಮಗ ವಿಜಯ್ ಜಗಳವಾಡುತ್ತಿದ್ದ. ಈ ವೇಳೆ ಮಧ್ಯ ಪ್ರವೇಶಿಸಿದ ಸಹೋದರ ಹಾಗೂ ಪತ್ನಿ ಗಲಾಟೆ ಬಿಡಿಸಲು ಮುಂದಾಗಿದ್ದಾರೆ.

ಜಗಳ ವಿಕೋಪಕ್ಕೆ ತಿರುಗಿ ತಂದೆಗೆ ಚಾಕು ಇರಿದು ವಿಜಯ್ ಪರಾರಿಯಾಗಿದ್ದಾನೆ. ಗಾಯಾಳು ಬಸಯ್ಯನನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೈಲಹೊಂಗಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular