HomeIndiaBREAKING: ಹಿಮಾಚಲ ಪ್ರದೇಶದ 6 ಬಂಡಾಯ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ಆದೇಶ

BREAKING: ಹಿಮಾಚಲ ಪ್ರದೇಶದ 6 ಬಂಡಾಯ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ಆದೇಶ

ನವದೆಹಲಿ : ರಾಜ್ಯ ಸಭೆ ಚುನಾವಣೆಯಲ್ಲಿ ಬಿಜೆಪಿಗೆ ಅಡ್ಡ ಮತದಾನ ಮಾಡಿದ ಆರು ಕಾಂಗ್ರೆಸ್ ಶಾಸಕರು ವಿಧಾನಸಭೆಯಿಂದ ಅನರ್ಹಗೊಳಿಸಿ ಸ್ಪೀಕರ್‌ ಆದೇಶ ಹೊರಡಿಸಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ 6 ಬಂಡಾಯ ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹಿಮಾಚಲ ಪ್ರದೇಶ ವಿಧಾನಸಭೆಯ ಸ್ಪೀಕರ್ ಕುಲದೀಪ್ ಸಿಂಗ್ ಪಠಾನಿಯಾ ಈ ಆದೇಶವನ್ನು ಪ್ರಕಟಿಸಿದ್ದಾರೆ.

ಸ್ಪೀಕರ್ ಎಲ್ಲಾ 6 ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸಿದರು. ಕಾಂಗ್ರೆಸ್ ಶಾಸಕ ಮತ್ತು ರಾಜ್ಯ ಸಚಿವ ಹರ್ಷವರ್ಧನ್ ಚೌಹಾಣ್ ಅವರು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹತೆಗಾಗಿ ಅರ್ಜಿ ಸಲ್ಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular