HomeKarnatakaBREAKING: ಒಳ ಮೀಸಲಾತಿ ಜಾರಿ ಸಂಬಂಧ ನಾಳೆ ನಿಗದಿಯಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ರದ್ದು

BREAKING: ಒಳ ಮೀಸಲಾತಿ ಜಾರಿ ಸಂಬಂಧ ನಾಳೆ ನಿಗದಿಯಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ರದ್ದು

ಬೆಂಗಳೂರು: ಒಳ ಮೀಸಲಾತಿ ಜಾರಿ ಸಂಬಂಧ ನಾಳೆ ನಡೆಯಬೇಕಿದ್ದ ವಿಶೇಷ ಸಂಪುಟ ಸಭೆ ರದ್ದು ಮಾಡಲಾಗಿದೆ. ಉಪ ಚುನಾವಣೆಯ ನೀತಿ ಸಂಹಿತೆ ಅಡ್ಡಿ ಹಿನ್ನೆಲೆಯಲ್ಲಿ ನಾಳಿನ ವಿಶೇಷ ಸಂಪುಟ ಸಭೆ ರದ್ದು ಮಾಡಲಾಗಿದೆ.

ಒಳ ಮೀಸಲಾತಿ ಜಾರಿಗೆ ಯಾವುದೇ ಅವಕಾಶ ಇಲ್ಲ. ಹೀಗಾಗಿ ನಾಳೆ ನಡೆಬೇಕಿದ್ದ ವಿಶೇಷ ಸಂಪುಟ ಸಭೆಯನ್ನು ರದ್ದು ಮಾಡಲಾಗಿದೆ.

ನೇರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ನಿಗದಿ ಸಂಬಂಧ ಶುಕ್ರವಾರ ವಿಶೇಷ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿತ್ತು. ಆದರೆ ಉಪಚುನಾವಣೆಯ ನೀತಿ ಸಂಹಿತೆ ಕಾರಣಕ್ಕೆ ಸಭೆಯನ್ನು ರದ್ದು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಳ ಮೀಸಲಾತಿ ವಿಚಾರದಲ್ಲಿ ಪರಿಶಿಷ್ಟ ಜಾತಿಯ ವಿವಿಧ ಸಂಘಟನೆಗಳು ಹೋರಾಟ ಕೈಗೊಂಡ ಹಿನ್ನೆಲೆಯಲ್ಲಿ ಮಾರ್ಚ್ 27ರಂದು ಶುಕ್ರವಾರ ವಿಶೇಷ ಸಂಪುಟ ಸಭೆ ಕರೆಯಲು ಸೂಚನಾ ಪತ್ರ ಹೊರಡಿಸಲಾಗಿತ್ತು. ಈ ಪ್ರಕಟಣೆಯ ನಂತರ ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಲ್ಲಿದೆ. ಹೀಗಾಗಿ ವಿಶೇಷ ಸಂಪುಟ ಸಭೆ ರದ್ದು ಮಾಡಲಾಗಿದೆ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular