HomeKarnatakaBREAKING : ಆ.17 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ 'ಸಾಂದರ್ಭಿಕ ರಜೆ' ಮಂಜೂರು |Govt...

BREAKING : ಆ.17 ರಂದು ರಾಜ್ಯ ಸರ್ಕಾರಿ ನೌಕರರಿಗೆ ವಿಶೇಷ ‘ಸಾಂದರ್ಭಿಕ ರಜೆ’ ಮಂಜೂರು |Govt Employee

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವೃಂದ ಸಂಘಗಳ ವತಿಯಿಂದ ದಿನಾಂಕ:17.08.2024 ರಂದು ಬೆಂಗಳೂರು ನಗರದ ಅರಮನೆ ಆವರಣದಲ್ಲಿ “ಅಭಿನಂದನೆ’ ಹಾಗೂ “ಕಾರ್ಯಾಗಾರ’ ಆಯೋಜಿಸಲಾಗಿದೆ. ಈ ಹಿನ್ನೆಲೆ ದಿನಾಂಕ: 17.08.2024 ರಂದು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ನೌಕರರು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಸದರಿ ಸಮ್ಮೇಳನದಲ್ಲಿ ಭಾಗವಹಿಸಿದ ಬಗ್ಗೆ ಅಧಿಕೃತ ಹಾಜರಾತಿ ಪತ್ರವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಅಥವಾ ಇವರಿಂದ ನಾಮನಿರ್ದೇಶನ ಹೊಂದಿದ ಅಧಿಕಾರಿಗಳಿಂದ ನಡೆದು ಒದಗಿಸಬೇಕು.

ಈ ಆಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಅಧಿಕಾರಿ ನೌಕರರು, ನಿಗಮ-ಮಂಡಳಿ, ಪ್ರಾಧಿಕಾರ ಹಾಗೂ ಇತರ ಸ್ಥಳೀಯ/ಸ್ನಾಯತ್ತ ಸಂಸ್ಥೆಗಳ ಅಧಿಕಾರಿ-ನೌಕರರೂ ಅಧಿಕಾರವುಳ್ಳ ಅಧಿಕಾರಿಗಳು ಮಂಜೂರು ಮಾಡತಕ್ಕದ್ದು ಎಂಬ ಷರತ್ತಿಗೊಳಪಟ್ಟು ಬೆಂಗಳೂರು ನಗರ ಜಿಲ್ಲೆಯ ಹಾಗೂ ರಾಜ್ಯದ ಇತರೆ ಜಿಲ್ಲೆಗಳ ಅಧಿಕಾರಿ/ನೌಕರರಿಗೆ ದಿನಾಂಕ: 17.08.2024 ರಂದು ಸಾರ್ವಜನಿಕ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿದೆ ಎಂದು ಸುತ್ತೋಲೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular