BREAKING : ‘SSLC’ ಮುಖ್ಯ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿ ಪ್ರಕಟ, ಇಲ್ಲಿದೆ ಮಾಹಿತಿ |Karnataka SSLC Exam 2024

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ 2024-25ನೇ ಸಾಲಿನ SSLC ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.

SSLC  ವಾರ್ಷಿಕ ಪರೀಕ್ಷೆಯನ್ನು ದಿನಾಂಕ 25-03-2024 ರಿಂದ 06-04-2024 ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ.  ಎಲ್ಲಾ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಗಮನಿಸಲು ತಿಳಿಸಲಾಗಿದೆ.

 

ವಿಶೇಷ ಸೂಚನೆ :

1) 08.04.2024 (ಸೋಮವಾರ) ರಂದು ಜೆ.ಟಿ.ಎಸ್. (56, 57, 58, 59 & 75, 76, 77 ವಿಷಯಗಳು) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು.

2. ಹಿಂದೂಸ್ಥಾನಿ ಸಂಗೀತ & ಕರ್ನಾಟಕ ಸಂಗೀತದ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45ರವರೆಗೆ ಮತ್ತು ಪ್ರಾಯೋಗಿಕಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 05.15 ಗಂಟೆಯವರೆಗೆ ನಡೆಸಲಾಗುವುದು.

3. ಅಂಧ, ಕಿವುಡ ಮತ್ತು ಮೂಗ ಹಾಗೂ ಕಲಿಕಾ ನ್ಯೂನತೆ ಇರುವ ವಿದ್ಯಾರ್ಥಿಗಳಿಗೆ 3 ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 1 ಗಂಟೆ ಹಾಗೂ 2 ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 40 ನಿಮಿಷಗಳ ಸಮಯವನ್ನು ನೀಡಲಾಗುವುದು.

ವಿ.ಸೂ: ಪ್ರತಿ ವಿಷಯಕ್ಕೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆಯ ಪ್ರಾರಂಭದಲ್ಲಿ ನೀಡಲಾಗುವುದು
ಸಿ.ಸಿ.ಇ. ರೆಗ್ಯುಲರ್ ಮತ್ತು ಸಿ.ಸಿ.ಇ. ಪುನರಾವರ್ತಿತ ಅಭ್ಯರ್ಥಿಗಳಿಗೆ

1. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷೆಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

2. ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

3. ಎನ್.ಎಸ್.ಕ್ಯೂ.ಎಫ್. ವಿಷಯಗಳ ಪರೀಕ್ಷೆ ಬೆಳಗ್ಗೆ 10.15 ರಿಂದ 12.30ರವರೆಗೆ ನಡೆಯಲಿದೆ.

4. ಜೆ.ಟಿ.ಎಸ್. ವಿಷಯವಾದ ಇಂಜಿನಿಯರಿಂಗ್ ಗ್ರಾಫಿಕ್ಸ್ (72) ವಿಷಯದ ಪರೀಕ್ಷೆ ಮಧ್ಯಾಹ್ನ 2.30 ಗಂಟೆಯಿಂದ 5.45ರವರೆಗೆ ನಿಗದಿಪಡಿಸಿದೆ.

5. ಕರ್ನಾಟಕ ಸಂಗೀತ ಮತ್ತು ಹಿಂದೂಸ್ಥಾನಿ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15ರವರೆಗೆ ನಿಗದಿಪಡಿಸಿದೆ.

ಸಿಸಿಇ ಖಾಸಗಿ ಅಭ್ಯರ್ಥಿಗಳು, ಸಿಸಿಇ ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ ಸಿ.ಸಿ.ಇ. ವ್ಯಾಪ್ತಿಗೆ ಒಳಪಡದ ಪುನರಾವರ್ತಿತಅಭ್ಯರ್ಥಿಗಳು, NSR & NSPR ಅಭ್ಯರ್ಥಿಗಳಿಗೆ

1. ಪ್ರಥಮ ಭಾಷೆಗೆ 125 ಗರಿಷ್ಠ ಅಂಕಗಳು, ಉಳಿದ ವಿಷಯಗಳಿಗೆ ಪ್ರತಿ ವಿಷಯಕ್ಕೆ ಗರಿಷ್ಠ 100 ಅಂಕಗಳಂತೆ ಪರೀಕ್ಷೆ ನಿಗದಿಪಡಿಸಲಾಗಿದೆ.
2. ಪ್ರಥಮ ಭಾಷೆ ಮತ್ತು ಐಚ್ಚಿಕ ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷೆಗಳಿಗೆ ಪರೀಕ್ಷೆ ಬರೆಯಲು 2.00 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

 

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read