HomeLatest NewsBREAKING : 'ಬೂಕರ್ ಪ್ರಶಸ್ತಿ' ಪುರಸ್ಕೃತ ಬಾನು ಮುಷ್ತಾಕ್ , ದೀಪಾ ಭಾಸ್ತಿಗೆ ರಾಜ್ಯ ಸರ್ಕಾರದಿಂದ...

BREAKING : ‘ಬೂಕರ್ ಪ್ರಶಸ್ತಿ’ ಪುರಸ್ಕೃತ ಬಾನು ಮುಷ್ತಾಕ್ , ದೀಪಾ ಭಾಸ್ತಿಗೆ ರಾಜ್ಯ ಸರ್ಕಾರದಿಂದ 10 ಲಕ್ಷ ರೂ. ಪುರಸ್ಕಾರ ಘೋಷಣೆ

ಬೆಂಗಳೂರು : ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ 10 ಲಕ್ಷ ರೂ. ಪುರಸ್ಕಾರ ಘೋಷಿಸಿದ್ದಾರೆ.

ಈ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಅವರ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು, ಮಾತನಾಡಿದೆ. ಶ್ರೀಮತಿ ಬಾನು ಅವರು ಕನ್ನಡದ ಕೃತಿಯ ಮೂಲಕ ಬೂಕರ್ ಪ್ರಶಸ್ತಿಗೆ ಭಾಜನರಾಗಿ ಜಗತ್ತಿಗೆ ಕನ್ನಡದ ಜ್ಯೋತಿಯನ್ನು ಬೆಳಗಿ ಕನ್ನಡವನ್ನು ಉಳಿಸಿದ್ದಾರೆ. ಅನುವಾದವನ್ನು ಮಾಡಿರುವ ಶ್ರೀಮತಿ ದೀಪಾ ಅವರು ದೇಶಕ್ಕೆ ಆರತಿಯಾಗಿದ್ದಾರೆ ಎಂದು ಹೆಮ್ಮೆಪಡುತ್ತೇನೆ.

ಇಬ್ಬರು ಸಾಧಕರು ಸಪ್ತಸಾಗರದಾಚೆ ಕರ್ನಾಟಕಕ್ಕೆ ಗೌರವವನ್ನು ತಂದಿದ್ದಾರೆ. ಪ್ರತಿಯೊಬ್ಬರಿಗೂ ಕೂಡ ಅವರ ಭಾಷೆ, ಸಂಸ್ಕೃತಿ ಮುಖ್ಯ. ನಮ್ಮ ಭಾಷೆ ಮತ್ತು ನಾಡಿನ ಗೌರವವನ್ನು ಹೆಚ್ಚಿಸಿದ ಶ್ರೀಮತಿ ಬಾನು ಮುಷ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಅವರಿಗೆ ತುಂಬು ಹೃದಯದ ಅಭಿನಂದನೆಗಳು. ಅವರಿಗೆ ಸರ್ಕಾರದ ವತಿಯಿಂದ ತಲಾ 10 ಲಕ್ಷ ರೂ.ಗಳನ್ನು ಗೌರವಪೂರ್ವಕವಾಗಿ ಘೋಷಿಸುತ್ತಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular